Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 137:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೆನೆಸಿಕೊ ಪ್ರಭು, ಜೆರುಸಲೇಮಿನ ನಾಶನದಿನ ಅವರಾಡಿದ್ದನು: I “ಕೆಡವಿ ನೆಲಕೆ, ಬುಡಸಹಿತ ಕೆಡವಿ” ಎಂದಾ ಅಧಮ ಎದೋಮ್ಯರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನೇ, ಎದೋಮ್ಯರ ಹಾನಿಗಾಗಿ ಯೆರೂಸಲೇವಿುನ ನಾಶನದಿನವನ್ನು ನೆನಪುಮಾಡಿಕೋ. ಅವರು - ಅದನ್ನು ಹಾಳುಮಾಡಿರಿ, ಅಸ್ತಿವಾರಸಹಿತ ಹಾಳುಮಾಡಿರಿ ಎಂದು ಹೇಳಿದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆರೂಸಲೇಮು ಬಿದ್ದುಹೋದ ದಿವಸದಲ್ಲಿ, “ಹಾಳುಮಾಡಿರಿ, ಅದರ ಅಸ್ತಿವಾರದವರೆಗೆ ಹಾಳುಮಾಡಿರಿ,” ಎಂದು ಹೇಳಿದ ಎದೋಮಿನವರನ್ನು ಯೆಹೋವ ದೇವರೇ ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 137:7
17 ತಿಳಿವುಗಳ ಹೋಲಿಕೆ  

ನಿನ್ನ ಅಭಿಷಿಕ್ತನಿಗಾಗಿಯೂ ಮತ್ತು ನಿನ್ನ ಪ್ರಜೆಯ ರಕ್ಷಣೆಗಾಗಿಯೂ ನೀನು ಯಾವಾಗಲೂ ಮುಂದಾಗಿರುತ್ತಿ; ದುಷ್ಟರ ಮನೆಯ ಮುಖ್ಯಸ್ಥರನ್ನು ಸದೆಬಡೆದು ಅವರ ಕುಟುಂಬಗಳನ್ನು ಬುಡಸಮೇತವಾಗಿ ಜನರ ಮುಂದೆ ಬೆತ್ತಲೆಯಾಗಿ ಮಾಡುವಿ. ಸೆಲಾ.


ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.


“ನರಪುತ್ರನೇ, ನೀನು ಸೇಯೀರ್ ಬೆಟ್ಟದ ಸೀಮೆಯ ವಿರುದ್ಧವಾಗಿ ಅದಕ್ಕೆ ಈ ಪ್ರವಾದನೆಯನ್ನು ನುಡಿ,


ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.


ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು, ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.


ಸೇನಾಧೀಶ್ವರನಾದ ಯೆಹೋವನು ನಿನಗೆ, ‘ಇಸ್ರಾಯೇಲರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದ್ದನ್ನು ನೆನಪುಮಾಡಿಕೊಂಡು ನಾನು ಅವರಿಗೆ ಮುಯ್ಯಿತೀರಿಸುವೆನು.


ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು.


ನನ್ನ ದೇವರೇ, ಟೋಬೀಯ, ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮತ್ತು ಇತರ ಪ್ರವಾದಿಗಳನ್ನು ನೆನಪಿನಲ್ಲಿಟ್ಟುಕೋ.


ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು