Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 138:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹೃದಯಪೂರ್ವಕ ವಂದನೆ ಪ್ರಭು ನಿನಗೆ I ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 [ಯೆಹೋವನೇ,] ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳೆದುರಿನಲ್ಲಿ ನಿನ್ನನ್ನು ಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು. ನಿನ್ನ ಹಾಡುಗಳನ್ನು ಎಲ್ಲಾ ದೇವರುಗಳ ಎದುರಿನಲ್ಲಿ ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿಮ್ಮನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 138:1
17 ತಿಳಿವುಗಳ ಹೋಲಿಕೆ  

ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು.


ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.


ಆದ್ದರಿಂದ ನಾನಾದರೋ ಆತ್ಮನಿಂದಲೂ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; ಆತ್ಮನಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು.


ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.


ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು.


“ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು,


ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.


ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.


ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?


ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.


ಪೌಲನು; “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ” ಅಂದನು.


ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.


ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.


ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು