ಕೀರ್ತನೆಗಳು 138:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, ನನ್ನನ್ನು ಚೈತನ್ಯಗೊಳ್ಳಿಸುವಿ, ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ, ನಿನ್ನ ಬಲಗೈ ನನ್ನನ್ನು ರಕ್ಷಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ ನನ್ನನ್ನು ಚೈತನ್ಯಗೊಳಿಸುವಿ; ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈ ಚಾಚುವಿ; ನಿನ್ನ ಬಲಗೈ ನನ್ನನ್ನು ರಕ್ಷಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ, ನೀವು ನನ್ನನ್ನು ಬದುಕಿಸಿ, ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿಮ್ಮ ಕೈಯನ್ನು ಚಾಚಿದ್ದೀರಿ; ನಿಮ್ಮ ಬಲಗೈಯಿಂದ ನನ್ನನ್ನು ರಕ್ಷಿಸಿದ್ದೀರಿ. ಅಧ್ಯಾಯವನ್ನು ನೋಡಿ |