Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನಗೆ ಕತ್ತಲೆಯು ಕತ್ತಲೆಯಲ್ಲ; ಇರುಳು ಹಗಲಾಗಿಯೇ ಇರುತ್ತದೆ, ಕತ್ತಲು ಬೆಳಕುಗಳೆರಡೂ ನಿನಗೆ ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕತ್ತಲು ಕತ್ತಲಲ್ಲ ನಿನಗೆ I ಇರುಳೂ ಹಗಲಾಗಿದೆ ನಿನಗೆ I ಕತ್ತಲು, ಬೆಳಕು - ಒಂದೇ ನಿನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನಗೆ ಕತ್ತಲೆಯು ಕತ್ತಲೆಯಲ್ಲ; ಇರುಳು ಹಗಲಾಗಿಯೇ ಇರುತ್ತದೆ; ಕತ್ತಲು ಬೆಳಕುಗಳೆರಡೂ ನಿನಗೆ ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ಕಾರ್ಗತ್ತಲೆಯೂ ನಿನಗೆ ಕತ್ತಲೆಯಲ್ಲ. ಕಾರ್ಗತ್ತಲೆಯು ನಿನಗೆ ಹಗಲಿನಂತೆ ಪ್ರಕಾಶಮಾನವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕತ್ತಲು ನಿಮಗೆ ಕತ್ತಲಾಗಿರುವುದಿಲ್ಲ; ರಾತ್ರಿಯು ಹಗಲಿನ ಹಾಗೆ ಪ್ರಕಾಶಿಸುವುದು, ಏಕೆಂದರೆ ಕತ್ತಲು ನಿಮಗೆ ಬೆಳಕಿನಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:12
6 ತಿಳಿವುಗಳ ಹೋಲಿಕೆ  

ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.


ಅಧರ್ಮಿಗಳು ಅಡಗಿಕೊಳ್ಳುವುದಕ್ಕೆ, ಅನುಕೂಲವಾದ ಯಾವ ಕತ್ತಲೂ, ಯಾವ ಗಾಢಾಂಧಕಾರವೂ ಇರುವುದಿಲ್ಲ.


ಜನರು ದೂರದಲ್ಲಿ ನಿಂತಿದ್ದರು. ಮೋಶೆಯು ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಹೋದನು.


ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಪಾತಾಳವು ದೇವರ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ.


ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ, ಇಸ್ರಾಯೇಲರ ಪಾಳೆಯಕ್ಕೂ ನಡುವೆ ಬಂದಿತು. ಅದು ಐಗುಪ್ತ್ಯರಿಗೆ ಕತ್ತಲನ್ನೂ, ಇಸ್ರಾಯೇಲರಿಗೆ ರಾತ್ರಿಯಲ್ಲಿ ಬೆಳಕನ್ನು ಕೊಟ್ಟಿದ್ದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು