Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನನ್ನಲ್ಲಿ ಕೇಡಿನ ಮಾರ್ಗ ಇರುತ್ತದೋ ಏನೋ ನೋಡಿ, ಸನಾತನ ಮಾರ್ಗದಲ್ಲಿ ನನ್ನನ್ನು ನಡೆಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಕೇಡಿದೆಯೇ ನೋಡು ನನ್ನ ಮಾರ್ಗದಲಿ I ನಡೆಸೆನ್ನನು ಆ ಸನಾತನ ಪಥದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾನು ಕೇಡಿನ ಮಾರ್ಗದಲ್ಲಿರುತ್ತೇನೋ ಏನೋ ನೋಡಿ ಸನಾತನಮಾರ್ಗದಲ್ಲಿ ನನ್ನನ್ನು ನಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನನ್ನಲ್ಲಿ ದುರಾಲೋಚನೆಗಳಿದ್ದರೆ ಕಂಡುಕೊ. ನನ್ನನ್ನು ಸನಾತನ ಮಾರ್ಗದಲ್ಲಿ ನಡೆಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನನ್ನಲ್ಲಿ ಕೇಡಿನ ಮಾರ್ಗವಿದೆಯೋ ಎಂದು ನೋಡಿರಿ, ನನ್ನನ್ನು ನಿತ್ಯ ಮಾರ್ಗದಲ್ಲಿ ನಡೆಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:24
17 ತಿಳಿವುಗಳ ಹೋಲಿಕೆ  

ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.


ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.


ನೀನು ನನ್ನ ಅಂತರಾತ್ಮವನ್ನು ವಿಮೋಚಿಸು, ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು. ಹೇ.


ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.


ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ತನ್ನಲ್ಲೇ ಭರವಸವಿಡುವವನು ಮೂಢನು, ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.


ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.


ನೀವು ಕರ್ತನಾದ ಯೇಸು ಕ್ರಿಸ್ತನನ್ನು ಸ್ವೀಕರಿಸಿದಂತೆಯೇ ಆತನಲ್ಲಿದ್ದವರಾಗಿ ಬಾಳಿರಿ.


ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ.


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.


ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ, ಧರ್ಮಾಸಕ್ತನು ಆತನಿಗೆ ಪ್ರಿಯ.


ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು