Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನನ್ನ ಕುರಿತು ನಿನಗಿರುವ ಅರಿವು ಅಗಾಧ I ನನ್ನ ಬುದ್ಧಿಗದು ಸಿಲುಕದಷ್ಟು ಉನ್ನತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನ್ನ ವಿಷಯವಾಗಿ ನನಗಿಂತಲೂ ನಿನಗೆ ಎಷ್ಟೋ ಹೆಚ್ಚಾಗಿ ತಿಳಿದಿರುವುದು ನನ್ನನ್ನು ಆಶ್ಚರ್ಯಗೊಳಿಸಿದೆ, ಅದನ್ನು ಗ್ರಹಿಸಿಕೊಳ್ಳುವುದಕ್ಕೂ ನನ್ನಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇಂಥ ಅರಿವು ನನಗೆ ಅತ್ಯಂತ ವಿಸ್ಮಯವಾಗಿದೆ, ಅದು ನನಗೆ ನಿಲುಕಲಾರದಷ್ಟು ಉನ್ನತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:6
8 ತಿಳಿವುಗಳ ಹೋಲಿಕೆ  

ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.


‘ಜ್ಞಾನವಿಲ್ಲದೆ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು?’ ಎಂಬ ನಿನ್ನ ಮಾತಿನಂತೆ ನಾನು ತಿಳಿಯದ ಸಂಗತಿಗಳನ್ನೂ, ನನಗೆ ಗೊತ್ತಿಲ್ಲದೆ ಬುದ್ಧಿಗೆ ಮೀರಿರುವ ಅದ್ಭುತಗಳನ್ನೂ ಕುರಿತು ಮಾತನಾಡಿದ್ದೇನೆ.


ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ.


ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಶಬ್ದವನ್ನು ಮಾತ್ರ ಕೇಳಿದ್ದೇವೆ, ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?”


ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?


ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ, ಹೌದು, ನಾಲ್ಕನ್ನು ಗ್ರಹಿಸಲಾರೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು