Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಕಾಶಕೆ ನಾನೇರಿದರೂ ನೀನಿರುವೆ ಅಲ್ಲಿ I ಪಾತಾಳದಲಿ ನಾ ನಿದ್ರಿಸಿದರೂ ನೀನಿರುವೆ ಅಲ್ಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತೀ; ಪಾತಾಳಕ್ಕೆ ಹೋಗಿ ಮಲಗಿಕೊಂಡೇನಂದರೆ ಅಲ್ಲಿಯೂ ನೀನಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಪರಲೋಕಕ್ಕೆ ಏರಿಹೋದರೆ ಅಲ್ಲಿಯೂ ನೀನಿರುವೆ. ಪಾತಾಳಕ್ಕೆ ಇಳಿದುಹೋದರೆ ಅಲ್ಲಿಯೂ ನೀನಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಆಕಾಶಕ್ಕೆ ಏರಿ ಹೋದರೆ, ನೀವು ಅಲ್ಲಿ ಇದ್ದೀರಿ; ಪಾತಾಳಕ್ಕೆ ಹೋಗಿ ನಿದ್ರಿಸಿದರೂ ನೀವು ಅಲ್ಲಿಯೂ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:8
8 ತಿಳಿವುಗಳ ಹೋಲಿಕೆ  

“ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ.


ನೀನು ಹದ್ದಿನಂತೆ ಮೇಲಕ್ಕೆ ಏರಿದರೂ, ನಿನ್ನ ಗೂಡು ನಕ್ಷತ್ರ ಮಂಡಲದಲ್ಲಿ ನೆಲೆಗೊಂಡಿದ್ದರೂ, ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು. ಇದು ಯೆಹೋವನ ನುಡಿ.


ಪಾತಾಳವೂ, ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಆತನಿಗೆ ಮತ್ತೂ ಸ್ಪಷ್ಟ.


ಪಾತಾಳವು ದೇವರ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ.


ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು