Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 14:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ, ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, ಇಸ್ರಾಯೇಲರು ಹರ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ಪ್ರಭು ತನ್ನ ಪ್ರಜೆಗೆ ಮರಳಿ ಸಿರಿಸಂಪತ್ತ I ಸಿಗಲಿ ಯಕೋಬ - ಇಸ್ರಯೇಲ ಜನತೆಗೆ ಹರ್ಷಾನಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ದುರವಸ್ಥೆಯಿಂದ ತಪ್ಪಿಸಿದಾಗ ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲ್ಯರು ಹರ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ? ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ. ಯೆಹೋವನಾದರೋ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು; ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ಯೆಹೋವ ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ, ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 14:7
4 ತಿಳಿವುಗಳ ಹೋಲಿಕೆ  

ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ, ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲರು ಹರ್ಷಿಸುವರು.


ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.


ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು.


ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು