Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 140:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು, ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ಬದುಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಭಜಿಸುವರು ಸಜ್ಜನರು ನಿನ್ನಾ ಸಿರಿನಾಮವನು I ಬಾಳ್ವರು ಸುಮನಸ್ಕರು ಬಿಡದೆ ನಿನ್ನ ಸನ್ನಿಧಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ಬದುಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು; ಯಥಾರ್ಥವಂತರು ನಿನ್ನ ಸನ್ನಿಧಿಯಲ್ಲಿ ಜೀವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಶ್ಚಯವಾಗಿ ನೀತಿವಂತರು ನಿಮ್ಮ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿಮ್ಮ ಸನ್ನಿಧಿಯಲ್ಲಿ ಬಾಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 140:13
15 ತಿಳಿವುಗಳ ಹೋಲಿಕೆ  

ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.


ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.


ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.


ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.


ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.


ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.


ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.


ನಿನ್ನ ಚಿತ್ತವನ್ನು ತಿಳಿಯಪಡಿಸಿ, ನನ್ನನ್ನು ನಡೆಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.


ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ.


ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.


ಆತನು ದುಷ್ಟರ ಪ್ರಾಣವನ್ನು ಉಳಿಸುವುದಿಲ್ಲ, ಗತಿಹೀನರ ನ್ಯಾಯವನ್ನು ಸ್ಥಾಪಿಸುವನು.


ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ, ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, “ನಿನಗೆ ಸಮಾನರು ಯಾರಿದ್ದಾರೆ?” ಎಂದು ನನ್ನ ಎಲುಬುಗಳೆಲ್ಲಾ ಹೇಳುವವು.


ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, ಹಾಳುಮಾಡಿದವರ ಜೀವವನ್ನು ಹಾಳುಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು