Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 140:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ, ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸ್ವಾಮಿದೇವಾ, ನೀನೆನಗೆ ದುರ್ಗಸ್ಥಾನ I ರಣರಂಗದಲಿ ನೀನೆನಗೆ ಶಿರಸ್ತ್ರಾಣ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ, ಯುದ್ಧಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನೇ, ನನ್ನ ಬಲಿಷ್ಠನಾದ ಒಡೆಯನು ನೀನೇ. ನನ್ನ ರಕ್ಷಕನೂ ನೀನೇ, ನನ್ನ ಶಿರಸ್ತ್ರಾಣವೂ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನನ್ನ ರಕ್ಷಣೆಯ ಬಲವಾಗಿರುವ ಸಾರ್ವಭೌಮ ಯೆಹೋವ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಕಾಪಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 140:7
17 ತಿಳಿವುಗಳ ಹೋಲಿಕೆ  

ಅವನು ನನಗೆ, ‘ನನ್ನ ತಂದೆಯೂ, ದೇವರೂ, ಆಶ್ರಯದುರ್ಗವೂ ನೀನೇ’ ಎಂದು ಹೇಳುವನು.


ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ.


ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು.


ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.


ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.


ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು, ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ.


ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?


ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.


ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”


ದಾವೀದನು ಎದೋಮಿನಲ್ಲೆಲ್ಲಾ ಕಾವಲುದಂಡನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.


ಅನಂತರ ದಾವೀದನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.


ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು