Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 140:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ, ಅವರ ಆಶೆಗಳನ್ನು ನೆರವೇರಿಸಬೇಡ, ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ” ಎಂದು ಹೇಳುತ್ತೇನೆ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೆರವೇರಿಸಬೇಡ ದುರುಳರ ಕೋರಿಕೆಯನು I ಕೈಗೂಡಿಸಬೇಡ ಪ್ರಭು, ಅವರ ಕುಯುಕ್ತಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದ ಹಾಗೆ ಅವರ ಆಶೆಗಳನ್ನು ನೆರವೇರಿಸಬೇಡ; ಅವರ ಕುಯುಕ್ತಿಯನ್ನು ಸಾಗಗೊಡಬೇಡ ಎಂದು ಹೇಳುತ್ತೇನೆ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನೇ, ಆ ದುಷ್ಟರ ದುರಾಶೆಯೂ ದುರಾಲೋಚನೆಯೂ ನೆರವೇರಲು ಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರೇ, ದುಷ್ಟರಿಗೆ ಅವರ ಇಷ್ಟಾರ್ಥವನ್ನು ಕೊಡಬೇಡಿರಿ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 140:8
7 ತಿಳಿವುಗಳ ಹೋಲಿಕೆ  

ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.


ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.


ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು