Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 141:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗುಪಕಾರ; ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ; ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರೋಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀತಿವಂತನು ನನ್ನನ್ನು ಸರಿಪಡಿಸಿದರೆ ಅದು ನನಗೇ ಒಳ್ಳೆಯದು. ನಿನ್ನ ಭಕ್ತರು ನನ್ನನ್ನು ಗದರಿಸಿದರೆ ಅದು ನನಗೇ ಒಳ್ಳೆಯದು. ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ. ಅವರು ನನ್ನನ್ನು ಗದರಿಸಲಿ, ಅದು ನನ್ನ ತಲೆಗೆ ಅಭಿಷೇಕ; ನನ್ನ ತಲೆ ಅದನ್ನು ಬೇಡವೆನ್ನದಿರಲಿ; ಆದರೂ ನನ್ನ ಪ್ರಾರ್ಥನೆ ಯಾವಾಗಲೂ ದುಷ್ಟರ ಕಾರ್ಯಗಳಿಗೆ ವಿರೋಧವಾಗಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 141:5
23 ತಿಳಿವುಗಳ ಹೋಲಿಕೆ  

ಮೂಢರ ಗಾನಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.


ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.


ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.


ಧರ್ಮನಿಂದಕನಿಗೆ ಪೆಟ್ಟುಹೊಡೆ, ನೋಡಿದ ಅವಿವೇಕಿ ಜಾಣನಾಗುವನು, ವಿವೇಕಿಯನ್ನು ಗದರಿಸು, ತಾನೇ ತಿಳಿವಳಿಕೆಯನ್ನು ಗ್ರಹಿಸುವನು.


ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು, ಗದರಿಕೆಯನ್ನು ಗಮನಿಸುವವನು ಜಾಣನು.


ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.


ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.


ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ, ಆಗಿರುವವರಿಗೆ ಉಪಕಾರಮಾಡು.


ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು.


ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.


ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು.


“‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.


ತಿಳಿವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ, ಮೂರ್ಖನು ಗದರಿಕೆಯನ್ನು ದ್ವೇಷಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು