Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 143:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ; ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೆನಸಿಕೊಳ್ಳುತಿಹೆನು ಹಳೆಯ ಕಾಲವನು I ಧ್ಯಾನಿಸುತಿಹೆನು ನಿನ್ನ ಕಾರ್ಯಗಳನು I ಸ್ಮರಿಸುತಿಹೆನು ನಿನ್ನ ಕೈಕೆಲಸಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹಳೇ ದಿನಗಳನ್ನು ನೆನಸಿಕೊಳ್ಳುತ್ತೇನೆ; ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಬಹುಕಾಲದ ಹಿಂದೆ ನಡೆದವುಗಳನ್ನು ಜ್ಞಾಪಿಸಿಕೊಳ್ಳುವೆನು. ನೀನು ಮಾಡಿದ ಅನೇಕ ಅದ್ಭುತಕಾರ್ಯಗಳನ್ನು ಆಲೋಚಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು, ನಿಮ್ಮ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿಮ್ಮ ಕೈಕೆಲಸವನ್ನು ಆಲೋಚಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 143:5
10 ತಿಳಿವುಗಳ ಹೋಲಿಕೆ  

ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ.


ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.


ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದುದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೋನ್ ಪರ್ವತ, ಮಿಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.


ಇಸಾಕನು ಸಂಜೆ ವೇಳೆಯಲ್ಲಿ ಧ್ಯಾನ ಮಾಡುವುದಕ್ಕಾಗಿ ಬಯಲು ಪ್ರದೇಶಕ್ಕೆ ಹೋಗಿದ್ದನು. ಅಲ್ಲಿ ಕಣ್ಣೆತ್ತಿ ನೋಡಲಾಗಿ ಒಂಟೆಗಳು ಬರುವುದನ್ನು ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು