Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 144:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು, ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ತುಂಬಿರಲಿ ಸಕಲ ವಿಧ ಧಾನ್ಯಗಳಿಂದ ನಮ್ಮ ಕಣಜಗಳು I ಈಯಲಿ ಸಾವಿರಾರು ಮರಿಗಳನು ನಮ್ಮ ಹೊಲದ ಕುರಿಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು; ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಮ್ಮ ಕಣಜಗಳು ಸಕಲ ಬಗೆಯ ದವಸಧಾನ್ಯಗಳಿಂದ ತುಂಬಿರುತ್ತವೆ. ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಮ್ಮ ಉಗ್ರಾಣಗಳು ನಾನಾ ವಿಧವಾದ ಧಾನ್ಯಗಳನ್ನು ತುಂಬಿರಲಿ. ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಹೊಲಗಳಲ್ಲಿ ಹತ್ತು ಸಹಸ್ರವಾಗಿ ಹೆಚ್ಚಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 144:13
10 ತಿಳಿವುಗಳ ಹೋಲಿಕೆ  

ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.


ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ಮತ್ತು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು.


ನಿಮ್ಮ ಸಂತಾನದವರಿಗೂ, ವ್ಯವಸಾಯಗಳಿಗೂ, ದನ, ಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.


ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.


ನೀವು ಬಹುದಿನದಿಂದ ಇಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ; ಹೊಸದಕ್ಕೆ ಸ್ಥಳ ಉಂಟಾಗುವಂತೆ ಹಳೆಯದನ್ನು ತೆಗೆಯುವಿರಿ.


ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು