Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 144:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ, ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆಹಾಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಕಾಶವನು ತಗ್ಗಿಸಿ ಬಾ ಪ್ರಭು ಇಳಿದು I ಬೆಟ್ಟಗಳನು ನೀ ಮುಟ್ಟಲು, ಹೊಗೆ ಹೊರಹೊಮ್ಮುವುದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ; ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆ ಹಾಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನೇ, ಆಕಾಶವನ್ನು ಹರಿದು ಇಳಿದು ಬಾ. ಪರ್ವತಗಳನ್ನು ಮುಟ್ಟು. ಆಗ ಅವುಗಳಿಂದ ಹೊಗೆಯು ಮೇಲೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರೇ, ನಿಮ್ಮ ಆಕಾಶಗಳನ್ನು ಒಡೆದು ಇಳಿದು ಬನ್ನಿರಿ; ಬೆಟ್ಟಗಳನ್ನು ಮುಟ್ಟಿರಿ, ಆಗ ಅವುಗಳಿಂದ ಹೊಗೆ ಹೊರಹೊಮ್ಮುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 144:5
8 ತಿಳಿವುಗಳ ಹೋಲಿಕೆ  

ಆತನು ದೃಷ್ಟಿಸಿದ ಮಾತ್ರದಿಂದಲೇ ಭೂಮಿಯು ಕಂಪಿಸುತ್ತದೆ; ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ.


ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.


ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ನೀವು ಮುಟ್ಟಬಹುದಾದ ಮತ್ತು ಬೆಂಕಿ ಹೊತ್ತಿದಂಥ ಬೆಟ್ಟಕ್ಕೂ, ಕಾರ್ಮೋಡ, ಕಗ್ಗತ್ತಲೆ, ಬಿರುಗಾಳಿ, ತುತ್ತೂರಿಯ ಶಬ್ದ, ಮಾತುಗಳ ಧ್ವನಿ ಎಂಬಿವುಗಳ ಬಳಿಗಲ್ಲ ನೀವು ಬಂದಿರುವುದು. ಆ ಧ್ವನಿಯನ್ನು ಕೇಳಿದವರು ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.


ಕೆರೂಬಿವಾಹನನಾಗಿ ಹಾರಿ, ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು