Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹೊಗಳುವೆನು ನಾ ದಿನದಿನವೂ ನಿನ್ನನು I ಭಜಿಸುವೆನೆಂದೆಂದಿಗೂ ನಿನ್ನ ಹೆಸರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದಿನಂಪ್ರತಿ ನಿನ್ನನ್ನು ಕೀರ್ತಿಸುವೆನು; ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿನ್ನನ್ನು ಪ್ರತಿದಿನವೂ ಸ್ತುತಿಸುವೆನು. ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಪ್ರತಿದಿನ ನಿಮ್ಮನ್ನು ಸ್ತುತಿಸುವೆನು; ಎಂದೆಂದಿಗೂ ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:2
7 ತಿಳಿವುಗಳ ಹೋಲಿಕೆ  

ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು.


ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ. ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ.


ನಿನ್ನ ನೀತಿವಿಧಿಗಳಿಗೋಸ್ಕರ, ನಿನ್ನನ್ನು ದಿನಕ್ಕೆ ಏಳು ಸಾರಿ ಕೊಂಡಾಡುತ್ತೇನೆ.


ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.


ದಾವೀದನು ಯೆಹೋವನ ಒಡಂಬಡಿಕೆ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುವುದಕ್ಕೆ ಆಸಾಫನನ್ನೂ, ಅವನ ಸಹೋದರರನ್ನೂ ಬಾಗಿಲನ್ನು ಕಾಯುವುದಕ್ಕಾಗಿ,


ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ.


ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು, ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು