Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 146:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕಣ್ಣನ್ನೀಯುವನು ಪ್ರಭು ಕುರುಡರಿಗೆ I ಉದ್ಧಾರಕನಾ ಪ್ರಭು ಕುಗ್ಗಿದವರಿಗೆ I ಆತನ ಒಲವಿರುವುದು ಸಾಧು ಸಜ್ಜನರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಕುರುಡರಿಗೆ ದೃಷ್ಟಿಕೊಡುವನು. ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು. ಯೆಹೋವನು ನೀತಿವಂತರನ್ನು ಪ್ರೀತಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಕುರುಡರ ಕಣ್ಣುಗಳನ್ನು ತೆರೆಯುತ್ತಾರೆ. ಅವರು ದೀನರನ್ನು ಎತ್ತುತ್ತಾರೆ. ನೀತಿವಂತರನ್ನು ಪ್ರೀತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 146:8
18 ತಿಳಿವುಗಳ ಹೋಲಿಕೆ  

ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.


ಯೆಹೋವನು ಬಿದ್ದವರನ್ನೆಲ್ಲಾ ಎತ್ತುವವನೂ, ಕುಗ್ಗಿದವರನ್ನೆಲ್ಲಾ ಉದ್ಧರಿಸುವವನೂ ಆಗಿದ್ದಾನೆ.


ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,


ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು.


ನೀವು ನನ್ನನ್ನು ಪ್ರೀತಿಸಿ ನಾನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.


ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.


ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.


ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.


ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ.


“ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.


ಕಿವುಡರೇ, ಕೇಳಿರಿ! ಕುರುಡರೇ, ನೀವು ಕಣ್ಣಿಟ್ಟು ನೋಡಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು