Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 146:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ರಕ್ಷಿಸುವನು ಪ್ರಭು ಪರದೇಶಿಗಳನು I ಆದರಿಸುವನು ಅನಾಥರನು, ವಿಧವೆಯರನು I ನಿರ್ಮೂಲ ಮಾಡುವನು ದುರ್ಜನರ ಮಾರ್ಗವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡಿಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ. ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ. ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ಪರದೇಶಸ್ಥರನ್ನು ಕಾಪಾಡುತ್ತಾರೆ. ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಉದ್ಧರಿಸುತ್ತಾರೆ. ಆದರೆ ದುಷ್ಟರ ಮಾರ್ಗವನ್ನು ಬೇಸರಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 146:9
22 ತಿಳಿವುಗಳ ಹೋಲಿಕೆ  

ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.


ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ.


“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ.


ಯೆಹೋವನು ಗರ್ವಿಷ್ಠನ ಮನೆಯನ್ನು ಕೆಡವಿಬಿಡುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು.


ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.


ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.


ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ, ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.


ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”


ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.


ಶುದ್ಧನಿಗೆ ಪರಿಶುದ್ಧನೂ, ಮೂರ್ಖನಿಗೆ ವಕ್ರನೂ ಆಗಿರುವಿ.


ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ.


ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.


ಅದಕ್ಕೆ ಅವನ ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು.


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.


ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.


ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು