Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ, ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಲಪಡಿಸಿಹನಾತ ನಿನ್ನ ಹೆಬ್ಬಾಗಿಲ ಅಗುಳಿಗಳನು I ಆಶೀರ್ವದಿಸಿಹನು ನಿನ್ನಲ್ಲಿರುವ ಮಕ್ಕಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ನಿನ್ನ ಹೆಬ್ಬಾಗಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ; ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜೆರುಸಲೇಮೇ, ದೇವರು ನಿನ್ನ ಬಾಗಿಲುಗಳ ಸರಳುಗಳನ್ನು ಬಲಪಡಿಸುವನು; ನಿನ್ನ ನಗರದಲ್ಲಿರುವ ಜನರನ್ನು ಆಶೀರ್ವದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮ್ಮ ಬಾಗಿಲುಗಳ ಅಗುಳಿಗಳನ್ನು ಬಲಗೊಳಿಸಿ, ದೇವರು ನಿಮ್ಮ ಜನರನ್ನು ಆಶೀರ್ವದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:13
20 ತಿಳಿವುಗಳ ಹೋಲಿಕೆ  

ಯೌವನಸ್ಥರಾದ ನಮ್ಮ ಗಂಡುಮಕ್ಕಳು ಸಮೃದ್ಧಿಯಾಗಿ ಬೆಳದಿರುವ ಸಸಿಗಳಂತಿರುವರು, ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು.


ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.


ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ, ಊರುಬಾಗಿಲುಗಳನ್ನೂ, ಗೋಡೆಯನ್ನು ಶುದ್ಧಪಡಿಸಿದರು.


ಗೋಡೆಯನ್ನು ಕಟ್ಟಿ ಮುಗಿಸಿದ ನಂತರ ನಾನು ಬಾಗಿಲುಗಳನ್ನು ಇರಿಸಿದೆನು; ದ್ವಾರಪಾಲಕರನ್ನೂ, ಗಾಯಕರನ್ನೂ, ಲೇವಿಯರನ್ನೂ ನೇಮಿಸಲಾಯಿತು.


ವೈರಿಗಳೂ ಮತ್ತು ಎದುರಾಳಿಗಳೂ ಯೆರೂಸಲೇಮಿನ ಬಾಗಿಲುಗಳಲ್ಲಿ ಹೆಜ್ಜೆಯಿಡುವರೆಂದು ಅರಸರು ಅಥವಾ ಭೂನಿವಾಸಿಗಳಲ್ಲಿ ಯಾರೂ ನಂಬಿರಲಿಲ್ಲ.


ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು.


ನಾನು ಅವರಿಗೆ, “ಬಿಸಿಲೇರುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಾಗಲೇ ಬಾಗಿಲುಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ ಯೆರೂಸಲೇಮಿನ ನಿವಾಸಿಗಳೊಳಗೆ ಕಾವಲುಗಾರರನ್ನು ಗೊತ್ತುಮಾಡಿರಿ, ಅವರಲ್ಲಿ ಕೆಲವರು ತಮ್ಮ ಕಾವಲಿನ ಸ್ಥಳಗಳಲ್ಲಿಯೂ, ಇನ್ನು ಕೆಲವರನ್ನು ಅವರ ಮನೆಯ ಎದುರಿನಲ್ಲಿಯೂ ಕಾವಲಿರುವಂತೆ ನೇಮಿಸಬೇಕು” ಎಂದು ಆಜ್ಞಾಪಿಸಿದೆನು.


ನಾನು ಪೌಳಿಗೋಡೆಯನ್ನು ಪುನಃ ಕಟ್ಟಿಸಿದೆನು, ಆದರೆ ಹೆಬ್ಬಾಗಿಲುಗಳನ್ನೂ ಇನ್ನೂ ಇಡಿಸಿರಲಿಲ್ಲ. ಜೀರ್ಣೋದ್ಧಾರದ ಕಾರ್ಯಗಳೆಲ್ಲವೂ ಪೂರ್ಣವಾಯಿತೆಂಬುದು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ, ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು.


ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.


ಯೆಹೋವನು ಇಂತೆನ್ನುತ್ತಾನೆ, “ಜನ ಮತ್ತು ಪಶುಗಳಿಲ್ಲದೆ ಹಾಳಾಗಿದೆ ಎಂದು ನೀವು ಹೇಳುವ ಈ ಸ್ಥಳದಲ್ಲಿ, ಅಂದರೆ ಜನ, ಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇಮಿನ ಬೀದಿಗಳಲ್ಲಿ,


ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು