Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ, ಆತನ ವಾಕ್ಯವು ಬಹು ವೇಗಶಾಲಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕಳಿಸುವನು ಧರೆಗೆ ತನ್ನ ಆಣತಿ I ಸಿದ್ಧಿಯಾಗುವುದದು ಬಲು ಶೀಘ್ರದಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ; ಆತನ ವಾಕ್ಯವು ಬಹುವೇಗಶಾಲಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆತನು ಭೂಮಿಗೆ ಆಜ್ಞಾಪಿಸಲು ಅದು ಕೂಡಲೆ ವಿಧೇಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾರೆ; ದೇವರ ವಾಕ್ಯವು ಬಹು ತೀವ್ರವಾಗಿ ಓಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:15
10 ತಿಳಿವುಗಳ ಹೋಲಿಕೆ  

ಸಿಡಿಲುಗಳು ಭೂಮಂಡಲದಲ್ಲೆಲ್ಲಾ ತಾನು ವಿಧಿಸುವುದನ್ನೇ ಮಾಡಲಿ ಎಂದು, ಅವುಗಳನ್ನು ನಡಿಸಿ ಸುತ್ತಮುತ್ತಲು ತಿರುಗಿಸುವನು.


ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,


ಬಳಿಕ ಯೇಸು ಆ ಶತಾಧಿಪತಿಗೆ, “ನೀನು ನಂಬಿದಂತೆ ನಿನಗಾಗಲಿ, ಹೋಗು” ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.


ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ, ಅದರಲ್ಲಿ ತೆರೆಗಳನ್ನು ಎಬ್ಬಿಸಿತು.


ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ, ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.


ಕರ್ತನು ಆಜ್ಞಾಪಿಸಿದನು; ಶುಭವಾರ್ತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀಸಮೂಹವು ಎಷ್ಟೋ ದೊಡ್ಡದು.


ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.


ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರಮಾಡಿದನು. ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.


ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು