Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 148:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಸ್ತೋತ್ರ! ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ, ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹೊಗಳಿರಿ ಸ್ವರ್ಗದಿಂದ ಪ್ರಭುವನು I ವಂದಿಸಿ ಮಹೋನ್ನತದಲಿ ಆತನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾಹುವಿಗೆ ಸ್ತೋತ್ರ! ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ; ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನಿಗೆ ಸ್ತೋತ್ರವಾಗಲಿ! ಮೇಲೋಕದಲ್ಲಿರುವ ದೇವದೂತರೇ, ಆಕಾಶಮಂಡಲದಿಂದ ಯೆಹೋವನನ್ನು ಸ್ತುತಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರನ್ನು ಸ್ತುತಿಸಿರಿ. ಆಕಾಶ ಮಂಡಲದಿಂದ ಯೆಹೋವ ದೇವರಿಗೆ ಸ್ತುತಿ ಸಲ್ಲಲಿ! ಮಹೋನ್ನತದ ದೇವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 148:1
8 ತಿಳಿವುಗಳ ಹೋಲಿಕೆ  

ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು; ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು.


ಭೂಮ್ಯಾಕಾಶಗಳೂ, ಸಮುದ್ರಗಳೂ, ಜಲಚರಗಳೂ ಆತನನ್ನು ಕೊಂಡಾಡಲಿ.


ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”


ಯೆಹೋವನಿಗೆ ಸ್ತೋತ್ರ! ನನ್ನ ಮನವೇ, ಯೆಹೋವನನ್ನು ಸ್ತುತಿಸು.


ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.


ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ, ಯೆಹೋವನನ್ನು ಕೊಂಡಾಡಿರಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು