Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 149:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇರಲಿ ಪ್ರಭುವಿನ ಸ್ತೋತ್ರ ಅವರ ಬಾಯಲಿ I ಇರಲಿ ಇಬ್ಬಾಯಿ ಕತ್ತಿಯು ಅವರ ಕೈಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜನರು ಆತನಿಗೆ ಗಟ್ಟಿಯಾಗಿ ಸ್ತೋತ್ರಮಾಡುತ್ತಾ ತಮ್ಮ ಇಬ್ಭಾಯಿ ಕತ್ತಿಗಳನ್ನು ಕೈಗಳಲ್ಲಿ ತೆಗೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಉನ್ನತ ದೇವರ ಸ್ತೋತ್ರವು ಅವರ ಬಾಯಿಯಲ್ಲಿ ಇರಲಿ. ಇಬ್ಬಾಯಿ ಖಡ್ಗ ಅವರ ಕೈಯಲ್ಲಿಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 149:6
12 ತಿಳಿವುಗಳ ಹೋಲಿಕೆ  

ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.


ನನ್ನ ಮೊರೆಯೊಡನೆ ಕೃತಜ್ಞತಾಸ್ತುತಿಯೂ ನನ್ನ ನಾಲಿಗೆಯ ಮೇಲಿತ್ತು.


ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.


ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ.


ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು.


ಆನಂತರ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬುವವರು, “ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವನ್ನು ಸಲ್ಲಿಸಿರಿ. ಯೆಹೋವನೇ, ಸರ್ವಸ್ತುತಿ ಕೀರ್ತನೆಗಳಿಗೂ ಮೀಗಿಲಾಗಿರುವ ನಿನ್ನ ಮಹಾನಾಮಕ್ಕೆ ಮಹಿಮೆಯುಂಟಾಗಲಿ.


ಕೈಯುಂಟು ಮುಟ್ಟುವುದಿಲ್ಲ; ಕಾಲುಂಟು ನಡೆಯುವುದಿಲ್ಲ; ಅವುಗಳ ಗಂಟಲಲ್ಲಿ ಶಬ್ದವೇ ಇಲ್ಲ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಅವನು ತನಗೋಸ್ಕರ ಒಂದು ಗುದ್ದುಮೊಳ ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ


ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು