ಕೀರ್ತನೆಗಳು 16:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I ಬಿಟ್ಟುಕೊಡುವುದಿಲ್ಲ ನಿನ್ನ ಆ ಭಕ್ತನನು ಪಾತಾಳಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ; ನಿನ್ನ ಪ್ರಿಯನಿಗೆ ಅಧೋಲೋಕವನ್ನು ನೋಡಗೊಡಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ. ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ; ನಿಮ್ಮ ನಂಬಿಗಸ್ತನನ್ನು ಕೊಳೆಯುವ ಅವಸ್ಥೆಗೆ ತರುವುದಿಲ್ಲ. ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.