Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 17:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಮಾರ್ಗದಿಂದ ಕಾಲು ಜಾರಲು ಬಿಡದೆ I ನಿನ್ನ ಪಥದಲಿ ದಿಟ್ಟ ಹೆಜ್ಜೆಯಿಟ್ಟು ನಡೆದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಮಾರ್ಗದಲ್ಲಿ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನ್ನ ಜೀವಮಾರ್ಗದಲ್ಲೇ ಹೆಜ್ಜೆಯಿಡುತ್ತಾ ನಡೆಯುತ್ತಿದ್ದೇನೆ. ನನ್ನ ಪಾದವು ತಪ್ಪು ದಾರಿಗೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿಮ್ಮ ದಾರಿಯಲ್ಲಿ ಸ್ಥಿರಪಡಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 17:5
12 ತಿಳಿವುಗಳ ಹೋಲಿಕೆ  

ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ದಾರಿಯಿಂದ ತೊಲಗಲಿಲ್ಲ.


ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು, ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.


ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು.


ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ.


“ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗಬಾರದು” ಅಂದುಕೊಂಡೆನು.


ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಪಾದಗಳು ಕದಲುವುದಿಲ್ಲ.


ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ, ನಿನ್ನ ಕೃಪೆಯು ನನಗೆ ಆಧಾರವಾಯಿತು.


“ಆತನು ತನ್ನ ನಂಬಿಗಸ್ತ ಭಕ್ತರ ಹೆಜ್ಜೆಗಳನ್ನು ಕಾಯುವನು; ಆದರೆ ದುಷ್ಟರನ್ನು ಅಂಧಕಾರದ ಮೌನದಲ್ಲಿ ಮುಳುಗಿಸುವನು, ಭುಜಬಲದಿಂದಲೇ ಯಾವನೂ ಜಯಹೊಂದಲಾರನು.


ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿ ಇಲ್ಲವೆಂದು ನನಗೆ ಗೊತ್ತು. ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನು ಇಡಲಾರನು.


ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ, ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ.


ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದುಕೊಳ್ಳುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು