Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು; ನನ್ನ ದೇವರ ಸಹಾಯದಿಂದ ಗೋಡೆಯನ್ನು ಹಾರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಿನ್ನ ಶಕ್ತಿಯಿದ್ದಲ್ಲಿ ನಾ ದಂಡಿನ ಮೇಲೆ ಬೀಳಬಲ್ಲೆ I ದೇವನೆರವಿದ್ದಲ್ಲಿ ನಾ ಕೋಟೆಕೊತ್ತಲನೆ ಹಾರಬಲ್ಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು; ನನ್ನ ದೇವರ ಸಹಾಯದಿಂದ ಪ್ರಾಕಾರವನ್ನು ಹಾರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆಹೋವನೇ, ನಿನ್ನ ಸಹಾಯದಿಂದ ನಾನು ಸೈನಿಕರೊಡನೆ ಓಡಬಲ್ಲೆ. ನನ್ನ ದೇವರ ಸಹಾಯದಿಂದ ನಾನು ಶತ್ರುಗಳ ಕೋಟೆಗಳನ್ನು ಹತ್ತುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನಿಮ್ಮ ಸಹಾಯದಿಂದ ವೈರಿಸೇನೆಯ ವಿರುದ್ಧ ಹೋಗುವೆನು, ನನ್ನ ದೇವರೊಂದಿಗೆ ಕೋಟೆಗೋಡೆಯನ್ನೂ ಹಾರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:29
16 ತಿಳಿವುಗಳ ಹೋಲಿಕೆ  

ನಿನ್ನ ಬಲದಿಂದ ನಾನು ದಂಡಿನ ಮೇಲೆ ಬೀಳುವೆನು. ನನ್ನ ದೇವರ ಸಹಾಯದಿಂದ ಪ್ರಾಕಾರಗಳನ್ನು ಹಾರುವೆನು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ, ತನ್ನ ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು.


ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.


ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.


ದಾವೀದನು ಯೆಹೋವನ ಆಜ್ಞಾನುಸಾರವಾಗಿ ಮಾಡಿ, ಫಿಲಿಷ್ಟಿಯರನ್ನು ಗೆಬದಿಂದ ಗೆಜೆರಿನವರೆಗೂ ಸಂಹರಿಸಿದನು.


ಅವನು, “ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡೆಯಬಹುದೋ” ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ, “ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು” ಎಂದು ಉತ್ತರ ಕೊಟ್ಟನು.


ಆಗ ದಾವೀದನು ಯೆಹೋವನನ್ನು, “ನಾನು ಆ ಗುಂಪನ್ನು ಹಿಂದಟ್ಟಬಹುದೋ, ಅದು ನನಗೆ ಸಿಕ್ಕುವುದೋ?” ಎಂದು ಕೇಳಲು ಆತನು, “ಹಿಂದಟ್ಟು, ಅದು ನಿನಗೆ ಸಿಕ್ಕುವುದು, ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ” ಎಂದು ಉತ್ತರಕೊಟ್ಟನು.


ಚೀಲದಲ್ಲಿ ಕೈ ಹಾಕಿ, ಒಂದು ಕಲ್ಲನ್ನು ತೆಗೆದು ಅವನ ಹಣೆಗೆ ಗುರಿಯಿಟ್ಟು ಕವಣೆಯನ್ನು ಬೀಸಿ ಹೊಡೆಯಲು ಕಲ್ಲು ಅವನ ಹಣೆಯೊಳಗೆ ಹೊಕ್ಕಿತು. ಅವನು ಬೋರಲುಬಿದ್ದನು


ಆತನ ದೀಪವು ನನ್ನ ತಲೆಯ ಮೇಲೆ ಪ್ರಕಾಶಿಸುತ್ತಿತ್ತು, ಆತನ ಬೆಳಕಿನಿಂದ ಕತ್ತಲಲ್ಲೂ ಸಂಚರಿಸುತ್ತಿದ್ದೆನು.


ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು