ಕೀರ್ತನೆಗಳು 18:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ನನ್ನ ಪರ ನೀನೇ ಗುರಾಣಿ ಹಿಡಿದು ರಕ್ಷಿಸಿದೆ I ನಿನ್ನ ಬಲಗೈ ನನಗೆ ಆಧಾರವಾಗಿದೆ I ನಿನ್ನ ಕೃಪಾವರ ತಂದಿತು ನನಗೆ ದೊಡ್ಡಸ್ತಿಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ದೇವರೇ, ನಿನ್ನ ವಿಜಯದ ಗುರಾಣಿಯನ್ನು ನೀನು ನನಗೆ ಕೊಟ್ಟಿರುವೆ. ನಿನ್ನ ಬಲಗೈ ನನಗೆ ಆಧಾರ ನೀಡುತ್ತದೆ. ನೀನು ನನ್ನನ್ನು ಪದೇಪದೇ ಬಲಗೊಳಿಸಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ. ನಿಮ್ಮ ಬಲಗೈ ನನಗೆ ಆಧಾರವಾಗಿದೆ; ನಿಮ್ಮ ಸಹಾಯವು ನನ್ನನ್ನು ಘನವಂತನನ್ನಾಗಿ ಮಾಡಿದೆ. ಅಧ್ಯಾಯವನ್ನು ನೋಡಿ |
“ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.