Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಪೇಕ್ಷಣೀಯವಾದುವವು ಚಿನ್ನ ಅಪರಂಜಿಗಿಂತ I ಅತಿಮಧುರವಾದುವು ಅಪ್ಪಟ ಜೇನುತುಪ್ಪಕ್ಕಿಂತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವು ಬಂಗಾರಕ್ಕಿಂತಲೂ ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆತನ ಉಪದೇಶಗಳು ಬಂಗಾರಕ್ಕಿಂತಲೂ ಅಮೂಲ್ಯವಾಗಿವೆ; ಅಪ್ಪಟವಾದ ಜೇನುತುಪ್ಪಕ್ಕಿಂತಲೂ ಮಧುರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ಅಮೂಲ್ಯವಾಗಿವೆ; ಅವು ಜೇನಿಗಿಂತಲೂ, ಅಪ್ಪಟ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:10
13 ತಿಳಿವುಗಳ ಹೋಲಿಕೆ  

ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ, ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.


ನೀನು ಕೊಟ್ಟ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ. ಯೋದ್.


ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.


ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.


ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ ಹೌದು ಅಪರಂಜಿಗಿಂತಲೂ ಉತ್ತಮ. ನನ್ನ ಮೂಲಕವಾದ ಆದಾಯವು ಚೊಕ್ಕ ಬೆಳ್ಳಿಗಿಂತಲೂ ಅಮೂಲ್ಯವಾಗಿದೆ.


ಕಂದಾ, ಜೇನು ಚೆನ್ನಾಗಿದೆಯಲ್ಲವೆ, ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಷ್ಟೆ, ಅದನ್ನು ತಿನ್ನು.


ಮೃಷ್ಟಭೋಜನದಿಂದಲೋ ಎಂಬಂತೆ, ನನ್ನ ಮನಸ್ಸು ಸಂತುಷ್ಟವಾಗಿರುವುದು; ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು.


ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು