ಕೀರ್ತನೆಗಳು 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತಿದ್ದಾರೆ, ಅಧಿಕಾರಿಗಳು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ, ಭೂಲೋಕದ ಅರಸರು ನಿಂತುಕೊಳ್ಳುತ್ತಾರೆ. ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು. ಅಧ್ಯಾಯವನ್ನು ನೋಡಿ |