ಕೀರ್ತನೆಗಳು 20:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಒದಗುವನು ಪ್ರಭುವು ಅಭಿಷಿಕ್ತನಿಗೆ I ಓಗೊಡುವನು ಸ್ವರ್ಗದಿಂದಾತನಿಗೆ I ಗೆಲುವನೀವನು ಭುಜಬಲದಿಂದವನಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು; ತನ್ನ ಭುಜಬಲದಿಂದ ಅವನಿಗೆ ವಿಜಯವನ್ನುಂಟು ಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು. ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು; ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಈಗ ನಾನು ಇದನ್ನು ಬಲ್ಲೆನು: ಯೆಹೋವ ದೇವರು ತಮ್ಮ ಅಭಿಷಿಕ್ತನಿಗೆ ಜಯ ನೀಡುವರು. ತಮ್ಮ ಜಯದ ಬಲಗೈಯ ಶಕ್ತಿಯಿಂದಲೂ ತಮ್ಮ ಪರಿಶುದ್ಧ ಪರಲೋಕದಿಂದಲೂ ಅವನಿಗೆ ಉತ್ತರಕೊಡುವರು. ಅಧ್ಯಾಯವನ್ನು ನೋಡಿ |