Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 21:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನೇ, ನೀನು ರಾಜನೊಂದಿರುವಾಗ ಅವನು ಉರಿಯುವ ಕುಲಿಮೆಯಂತಿರುವನು. ಅವನ ಕೋಪವು ಧಗಧಗಿಸುವ ಬೆಂಕಿಯಂತೆ ಸುಡುವುದು; ಅವನು ಶತ್ರುಗಳನ್ನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಬರುವ ಕಾಲದಲ್ಲಿ ಅವರನ್ನು ಅಗ್ನಿಕುಂಡದಂತೆ ದಹಿಸಿಬಿಡುವಿರಿ. ಯೆಹೋವ ದೇವರು ತಮ್ಮ ಬೇಸರದಿಂದ ಅವರನ್ನು ದಂಡಿಸಿಬಿಡುವರು; ಬೆಂಕಿಯು ಅವರನ್ನು ಭಸ್ಮ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 21:9
28 ತಿಳಿವುಗಳ ಹೋಲಿಕೆ  

“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.


ಆತನ ಮೂಗಿನಿಂದ ಹೊಗೆಯು ಎದ್ದು; ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು, ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.


ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ, ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ, ರಾಜ್ಯವನ್ನೂ ಮತ್ತು ಅಲ್ಲಿನ ಸರದಾರರನ್ನೂ ಹೀನಸ್ಥಿತಿಗೆ ತಂದಿದ್ದಾನೆ.


ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.


ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ,


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.


ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.


ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.


ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.


ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು


ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.


ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ಭೂಮಿಯು ಬಾಯ್ದೆರೆದು ದಾತಾನನನ್ನು ನುಂಗಿಬಿಟ್ಟಿತು; ಅಬಿರಾಮನ ಕಡೆಯವರನ್ನು ಮುಚ್ಚಿಬಿಟ್ಟಿತು.


ಆಗ ನನ್ನ ವಿಪತ್ತು ಸಮುದ್ರದ ಮರಳಿಗಿಂತಲೂ ಹೆಚ್ಚು ಭಾರವುಳ್ಳದ್ದೆಂದು ಗೊತ್ತಾಗುವುದು ಎಂದು ದುಡುಕಿನಿಂದ ಮಾತನಾಡಿದ್ದೇನೆ.


ಸೊದೋಮ್ ಗೊಮೋರದ ಸುತ್ತಲಿನ ಎಲ್ಲಾ ದಿಕ್ಕುಗಳ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಮೇಲಕ್ಕೇರುತ್ತಿತ್ತು.


ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು.


ಅವರನ್ನು ಹೊಡೆದು ಏಳಲಾರದಂತೆ ಮಾಡುವೆನು; ನನ್ನ ಪಾದದ ಕೆಳಗೆ ಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು