ಕೀರ್ತನೆಗಳು 22:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಸಡಲಿಹೋಗಿವೆ. ನನ್ನ ಗುಂಡಿಗೆ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನೆಲದ ಮೇಲೆ ಸುರಿದ ನೀರಿನಂತೆ ನನ್ನ ಬಲವು ಇಲ್ಲವಾಗಿದೆ; ನನ್ನ ಮೂಳೆಗಳೆಲ್ಲಾ ಸಡಿಲಗೊಂಡಿವೆ; ಹೃದಯವು ಮೇಣದಂತೆ ಕರಗಿಹೋಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾನು ಚೆಲ್ಲಿದ ನೀರಿನಂತಿದ್ದೇನೆ, ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿ ಹೋಗಿದೆ. ನನ್ನ ಹೃದಯವು ಮೇಣದ ಹಾಗೆ ನನ್ನೊಳಗೆ ಕರಗಿಹೋಗಿದೆ. ಅಧ್ಯಾಯವನ್ನು ನೋಡಿ |