Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಪ್ರಭು, ನೀನೆ ಸ್ಪೂರ್ತಿ, ತುಂಬುಸಭೆಯಲಿ ನಾ ಮಾಳ್ಪ ಸ್ತುತಿಗೆ I ಭಕ್ತಜನರ ಮುಂದೆ ನಾ ಸಲ್ಲಿಸುವೆ, ನಿನಗೆ ಹೊತ್ತ ಹರಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೋವನೇ, ನಿನ್ನ ಕಾರ್ಯಗಳಿಗಾಗಿ ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮಹಾಸಭೆಯಲ್ಲಿ ನಿಮ್ಮನ್ನು ಕುರಿತು ನನ್ನ ಸ್ತೋತ್ರವು ನಿಮ್ಮಿಂದ ಬರುವುದು; ನನ್ನ ಹರಕೆಗಳನ್ನು ನಿಮಗೆ ಭಯಪಡುವವರ ಮುಂದೆ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:25
11 ತಿಳಿವುಗಳ ಹೋಲಿಕೆ  

ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರ ಮುಂದೆ ಸ್ತುತಿಸುವೆನು.


ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು.


ನಾನು ನಿನ್ನ ಆಲಯಕ್ಕೆ ಬಂದು ಸರ್ವಾಂಗಹೋಮಗಳನ್ನು ಸಮರ್ಪಿಸುವೆನು.


ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.


ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.


ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.


ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ; ಹರಕೆಗಳು ನಿನಗೆ ಸಲ್ಲುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು