Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನಗೆ ಮೊರೆಯಿಟ್ಟು ವಿಮುಕ್ತರಾದರು; ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನಗೆ ಮೊರೆಯಿಟ್ಟವರು ವಿಮುಕ್ತರಾದರಯ್ಯಾ I ವಿಶ್ವಾಸವಿಟ್ಟು ಹತಾಶರಾಗಲಿಲ್ಲವಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನಗೆ ಮೊರೆಯಿಟ್ಟು ವಿಮುಕ್ತರಾದರು; ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಮ್ಮ ಪೂರ್ವಿಕರು ನಿನ್ನಲ್ಲಿ ಮೊರೆಯಿಟ್ಟಾಗ ಅವರನ್ನು ಶತ್ರುಗಳಿಂದ ಬಿಡಿಸಿದೆ. ನಿನ್ನಲ್ಲಿ ಭರವಸವಿಟ್ಟಿದ್ದ ಅವರಿಗೆ ನಿರಾಶೆಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ನಿಮಗೆ ಮೊರೆಯಿಟ್ಟದ್ದರಿಂದ ನೀವು ಅವರನ್ನು ರಕ್ಷಿಸಿದಿರಿ; ನಿಮ್ಮಲ್ಲಿ ಭರವಸೆಯಿಟ್ಟಿದ್ದರಿಂದ ಅವರು ಅಪಮಾನಕ್ಕೆ ಗುರಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:5
17 ತಿಳಿವುಗಳ ಹೋಲಿಕೆ  

“ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.


ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.


“ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ. ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.


ಆದರೆ ಆತನು ಕಷ್ಟದಲ್ಲಿದ್ದ, ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು.


ಯೆಹೋವನೇ, ನಿನ್ನನ್ನು ಮೊರೆಹೊಕ್ಕಿದ್ದೇನೆ; ಎಂದಿಗೂ ಅವಮಾನಕ್ಕೆ ಗುರಿಮಾಡಬೇಡ.


ಯೆಹೋವನೇ, ನಿನ್ನ ಮೊರೆಹೊಕ್ಕಿದ್ದೇನೆ; ನನ್ನನ್ನು ಎಂದಿಗೂ ಅವಮಾನಕ್ಕೆ ಗುರಿಪಡಿಸಬೇಡ. ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು.


ಇಸ್ರಾಯೇಲರು ಮಿದ್ಯಾನ್ಯರ ದೆಸೆಯಿಂದ ಬಹಳವಾಗಿ ಕುಗ್ಗಿಹೋಗಿ ಯೆಹೋವನಿಗೆ ಮೊರೆಯಿಟ್ಟರು.


ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.


ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.


ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ಸತ್ಯಸ್ವರೂಪನಾದ ಯೆಹೋವನಿಗೆ, ಹೌದು, ತಮ್ಮ ಪೂರ್ವಿಕರ ನಿರೀಕ್ಷೆಯಾದ ಯೆಹೋವನಿಗೆ ಪಾಪ ಮಾಡಿದರಲ್ಲಾ’ ಅಂದುಕೊಂಡರು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು