Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ” ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಇತ್ತನಿವನು ಭರವಸೆ, ಪ್ರಭುವೆ ತನ್ನುದ್ಧಾರಕನೆಂದು I ಆತನಿಗಿವನು ಮೆಚ್ಚುಗೆಯಾದರೆ ರಕ್ಷಿಸಲಿ” - ಇಂತೆಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಯೆಹೋವನಿಗೆ ಮೊರೆಯಿಡು, ಆತನು ನಿನ್ನನ್ನು ರಕ್ಷಿಸಬಹುದು. ಆತನು ನಿನ್ನನ್ನು ಬಹಳವಾಗಿ ಇಷ್ಟಪಡುವುದಾದರೆ ನಿನ್ನನ್ನು ಖಂಡಿತವಾಗಿ ರಕ್ಷಿಸುವನು” ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆತನು ಯೆಹೋವ ದೇವರ ಮೇಲೆ ಭರವಸೆಯಿಟ್ಟಿದ್ದಾನಲ್ಲಾ, ಯೆಹೋವ ದೇವರೇ ಆತನನ್ನು ಕಾಪಾಡಲಿ. ಯೆಹೋವ ದೇವರು ಆತನಲ್ಲಿ ಹರ್ಷಿಸುವುದಾದರೆ, ಅವರೇ ಆತನನ್ನು ಬಿಡಿಸಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:8
17 ತಿಳಿವುಗಳ ಹೋಲಿಕೆ  

ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು.


ಆತನು ನನ್ನನ್ನು ಬಿಡಿಸಿ ವಿಶಾಲ ಸ್ಥಳದಲ್ಲಿ ಸೇರಿಸಿದನು; ನನ್ನನ್ನು ಮೆಚ್ಚಿ ರಕ್ಷಿಸಿದನು.


ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.


ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.


ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ, ನಿನ್ನ ಉದ್ದೇಶಗಳು ಸಫಲವಾಗುವವು.


ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.


ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.


ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.


“ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ಈತನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.


“ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.


ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.


ನಾನೂ ನಿಮ್ಮ ಹಾಗೆ ಮಾತನಾಡಬಲ್ಲೆನು; ನಾನು ನಿಮ್ಮಂತೆ ಇದ್ದಿದ್ದರೆ, ನಾನು ನಿಮ್ಮ ವಿರುದ್ಧವಾಗಿ ಮಾತುಗಳನ್ನು ಹೆಣೆದು ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.


ನಾನು ಜನರ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ; ನನ್ನನ್ನು ನೋಡುವವರು ತಲೆಯಾಡಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು