Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತವಿುತ್ರನಂತಿರುವನು; ಅವರಿಗೇ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:14
18 ತಿಳಿವುಗಳ ಹೋಲಿಕೆ  

ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.


ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.


ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.


ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.


ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.


“ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.


ನೀವು ಅನುಸರಿಸಬೇಕೆಂದು ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು.


ಆ ಸಹಾಯಕನು ಯಾರೆಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.


ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವುದು.


ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ.


ನಿನ್ನ ಮನೆಯಲ್ಲಿ ಹುಟ್ಟಿದವನಿಗೂ, ನೀನು ಕ್ರಯಕ್ಕೆ ತೆಗೆದುಕೊಂಡವನಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ಒಡಂಬಡಿಕೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು, ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.


ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು