ಕೀರ್ತನೆಗಳು 26:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರೇ, ನನ್ನನ್ನು ನಿರ್ದೋಷನನ್ನಾಗಿ ನಿರ್ಣಯಿಸಿರಿ, ನಾನು ದೋಷವಿಲ್ಲದ ಜೀವನ ನಡೆಸಿದ್ದೇನೆ; ನಾನು ಯೆಹೋವ ದೇವರಲ್ಲಿ ಕದಲದೆ ಭರವಸೆ ಇಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |
ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.