Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 26:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರ ಕೈಗಳು ಬಲಾತ್ಕಾರ ನಡೆಸುತ್ತವೆ; ಅವರ ಬಲಗೈ ಲಂಚದಿಂದ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದೆ ಆ ಜನರ ಕೈಗಳಲಿ ಕೆಡುಕನ I ಬಲಗೈ ತುಂಬ ಲಂಚಕೋರತನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರ ಕೈಗಳು ಬಲಾತ್ಕಾರ ನಡಿಸುತ್ತವೆ; ಅವರ ಬಲಗೈ ಲಂಚದಿಂದ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರು ಜನರನ್ನು ವಂಚಿಸುವರು; ಕೆಟ್ಟಕಾರ್ಯಗಳನ್ನು ಮಾಡಲು ಲಂಚ ತೆಗೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರ ಕೈಗಳಲ್ಲಿ ಕೇಡು ಇದೆ; ಅವರ ಬಲಗೈ ಲಂಚಗಳಿಂದ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 26:10
17 ತಿಳಿವುಗಳ ಹೋಲಿಕೆ  

ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.


ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು.


ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.


ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ.


ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.


ಕೇಡುಮಾಡದಿದ್ದರೆ ಅವರಿಗೆ ನಿದ್ರೆಬಾರದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವುದು.


ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.


ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.


ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ, ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ.


ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು