Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತಳ್ಳಬೇಡೆನ್ನನು ವೈರಿಗಳ ವಶಕ್ಕೆ I ಸುಳ್ಳುಸಾಕ್ಷಿಗಳು, ಕ್ರೂರಿಗಳವರೆನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ವೈರಿಗಳು ನನ್ನ ಮೇಲೆ ಆಕ್ರಮಣ ಮಾಡಿದ್ದಾರೆ. ನನಗೆ ಕೇಡಾಗಲೆಂದು ಸುಳ್ಳುಗಳನ್ನು ಹೇಳಿದ್ದಾರೆ. ಯೆಹೋವನೇ, ಇಂಥ ವೈರಿಗಳ ಕೈಗೆ ನನ್ನನ್ನು ಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡಿರಿ; ಸುಳ್ಳುಸಾಕ್ಷಿಗಳೂ ಕ್ರೂರ ನಿಂದಕರೂ ನನಗೆ ವಿರೋಧವಾಗಿ ಎದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:12
17 ತಿಳಿವುಗಳ ಹೋಲಿಕೆ  

ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು.


ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ; ನಿರಾತಂಕ ಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ.


ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.


ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ;


ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವುದಕ್ಕೆ ಅವರಿಗೆ ಅವಕಾಶವಿರಬಾರದು; ಅವನನ್ನು ಸಂಪೂರ್ಣವಾಗಿ ನಾಶಮಾಡಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು.


ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ, ಅವರ ಆಶೆಗಳನ್ನು ನೆರವೇರಿಸಬೇಡ, ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ” ಎಂದು ಹೇಳುತ್ತೇನೆ. ಸೆಲಾ


ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!


“ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗಬಾರದು” ಅಂದುಕೊಂಡೆನು.


ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.


“ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.


ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.


ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ; ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ.


ಯಾವನಾದರೂ ನ್ಯಾಯವಿರುದ್ಧವಾಗಿ ಬಂದು ಮತ್ತೊಬ್ಬನನ್ನು ಅಪರಾಧಿ ಎಂದು ಸಾಕ್ಷಿಹೇಳಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು