Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ ಆತನ ಪ್ರಸನ್ನತೆಯನ್ನು ನೋಡುವದಕ್ಕೂ ಆತನ ಮಂದಿರದಲ್ಲಿ ಧ್ಯಾನಮಾಡುವದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರುನೋಡುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲಿ ವಾಸಿಸುತ್ತಾ ಆತನ ಪ್ರಸನ್ನತೆಯನ್ನು ವೀಕ್ಷಿಸುತ್ತಾ ಆತನ ಮಾರ್ಗದರ್ಶನವನ್ನು ಎದುರುನೋಡುತ್ತಾ ಇರಬೇಕೆಂಬ ಒಂದೇ ಒಂದು ಕೋರಿಕೆಯನ್ನು ಯೆಹೋವನಲ್ಲಿ ಕೇಳಿಕೊಂಡು ಅದನ್ನೇ ಎದುರುನೋಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ, ಅದರ ದಯೆಯನ್ನು ನೋಡುತ್ತಾ ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ ಇರಬೇಕೆಂಬ ಒಂದೇ ವರವನ್ನು ಯೆಹೋವ ದೇವರಿಂದ ಕೇಳಿಕೊಂಡು ಅದನ್ನೇ ಹುಡುಕುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:4
30 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ.


ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.


ನಿನ್ನ ಅಂಗಳದಲ್ಲಿ ವಾಸಿಸುವವರಾಗಿ, ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ, ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ.


ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. ಸೆಲಾ


ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.


ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.


“ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು.


ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.


ಸಹೋದರರೇ, ನಾನಂತೂ ಪಡೆದುಕೊಂಡವನೆಂದು ನನ್ನನ್ನು ಈ ವರೆಗೂ ಎಣಿಸಿಕೊಳ್ಳುವುದಿಲ್ಲ. ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವುದಕ್ಕಾಗಿ ಎದೆಬೊಗ್ಗಿದವನಾಗಿ,


ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.


ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ. ನಾವು ಕೈ ಹಾಕಿದ ಕೆಲಸವನ್ನು ನಮಗೆ ಸಫಲಪಡಿಸು; ನಾವು ಕೈಹಾಕಿದ ಕೆಲಸವನ್ನು ಸಫಲ ವಾಗುವಂತೆ ಮಾಡು.


ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.


ಅವಳು ಎಂಭತ್ತುನಾಲ್ಕು ವರ್ಷದವಳಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿ ಹಗಲೂ ದೇವರನ್ನು ಆರಾಧಿಸುತ್ತಿದ್ದಳು.


ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.


ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, ದೇವರು ಪ್ರಕಾಶಿಸುತ್ತಾನೆ.


ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.


ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು, ದೇವರ ಮೇಲೆ ನಿರೀಕ್ಷೆಯನ್ನಿಟ್ಟು, ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,


ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು.


“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ಆಗ ದಾವೀದನು ಯೆಹೋವನನ್ನು, “ನಾನು ಆ ಗುಂಪನ್ನು ಹಿಂದಟ್ಟಬಹುದೋ, ಅದು ನನಗೆ ಸಿಕ್ಕುವುದೋ?” ಎಂದು ಕೇಳಲು ಆತನು, “ಹಿಂದಟ್ಟು, ಅದು ನಿನಗೆ ಸಿಕ್ಕುವುದು, ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ” ಎಂದು ಉತ್ತರಕೊಟ್ಟನು.


ಅವನು ಇವನಿಗೆ ಯೆಹೋವನ ಚಿತ್ತವನ್ನು ತಿಳಿಸಿ, ಆಹಾರವನ್ನೂ, ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು