ಕೀರ್ತನೆಗಳು 27:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನೇ ನನಗೆ ಸಹಾಯಕನಾಗಿದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದು ಬಿಡಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನೇ, ನನಗೆ ವಿಮುಖನಾಗಬೇಡ: ನಿನ್ನ ಸೇವಕನನ್ನು ಕೋಪದಿಂದ ತಳ್ಳಿಬಿಡಬೇಡ. ನನ್ನ ದೇವರೇ, ನನ್ನ ರಕ್ಷಕನು ನೀನೇ. ನನ್ನನ್ನು ಕೈ ಬಿಡಬೇಡ! ತೊರೆದುಬಿಡಬೇಡ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿಮ್ಮ ಮುಖವನ್ನು ನನಗೆ ಮರೆಮಾಡಬೇಡಿರಿ; ನಿಮ್ಮ ಸೇವಕನಾದ ನನ್ನನ್ನು ತಳ್ಳಬೇಡಿರಿ; ನೀವೇ ನನಗೆ ಸಹಾಯಕರಾಗಿದ್ದೀರಿ; ನನ್ನ ರಕ್ಷಕ ಆಗಿರುವ ದೇವರೇ, ನನ್ನನ್ನು ತ್ಯಜಿಸಬೇಡಿರಿ. ನನ್ನನ್ನು ಬಿಟ್ಟುಬಿಡಬೇಡಿರಿ. ಅಧ್ಯಾಯವನ್ನು ನೋಡಿ |
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.