Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 28:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರಭುವೇ ಶಕ್ತಿ, ಎನಗೆ ರಕ್ಷೆ, ಎನ್ನೆದೆಯ ನಂಬುಗೆ I ಎನ್ನ ಮನಃಪೂರ್ವಕ ಕೀರ್ತನೆ, ಆತನಿತ್ತ ನೆರವಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ನನಗೆ ಬಲವೂ ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ. ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 28:7
36 ತಿಳಿವುಗಳ ಹೋಲಿಕೆ  

ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.


ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು.


ಯೆಹೋವನು ತನ್ನ ಜನರಿಗೆ ಬಲವೂ, ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.


ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”


ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?


ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು.


ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.


ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ. ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.


ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.


ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.


ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು; ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ.


ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.


ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.


ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.


ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.


ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು.


ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.


ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ; ಏಕೆ ನನ್ನನ್ನು ತಳ್ಳಿಬಿಟ್ಟೆ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?


ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು