Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 29:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸ್ತುತಿಸಿರಿ ಆತನ ಶ್ರೀನಾಮ ಮಹಿಮೆಯನು I ಪೂಜಿಸಿರಿ ಪವಿತ್ರಾಂಬರರಾಗಿ ಆತನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನನ್ನು ಸ್ತುತಿಸುತ್ತಾ ಆತನ ಹೆಸರನ್ನು ಘನಪಡಿಸಿರಿ. ಪರಿಶುದ್ಧ ವಸ್ತ್ರಗಳನ್ನು ಧರಿಸಿಕೊಂಡು ಆತನನ್ನು ಆರಾಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರ ನಾಮಕ್ಕೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ವಸ್ತ್ರದೊಡನೆ ಯೆಹೋವ ದೇವರನ್ನು ಆರಾಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 29:2
11 ತಿಳಿವುಗಳ ಹೋಲಿಕೆ  

ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.


ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.


ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.


ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.


ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ. ನಾವು ಕೈ ಹಾಕಿದ ಕೆಲಸವನ್ನು ನಮಗೆ ಸಫಲಪಡಿಸು; ನಾವು ಕೈಹಾಕಿದ ಕೆಲಸವನ್ನು ಸಫಲ ವಾಗುವಂತೆ ಮಾಡು.


ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ, ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ.


ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು