Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 29:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪ್ರಭು ಆಸೀನನು ಆಗಸದ ಜಲರಾಶಿಗಳ ಮೇಲೆ I ಪ್ರತಿಭಾಸ್ವರೂಪನಾದ ದೇವನಿದೋ, ಗುಡುಗುತ್ತಲೇ I ಆತನಾಡಂಬರ ಧ್ವನಿ ಮೇಘಮಂಡಲದ ಮೇಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನ ಸ್ವರವು ಸಮುದ್ರದ ಮೇಲೆ ಕೇಳಿ ಬರುವುದು. ಮಹಾಸಾಗರದ ಮೇಲಿನ ಗುಡುಗಿನಂತೆ ಮಹಿಮಾಸ್ವರೂಪನಾದ ದೇವರ ಸ್ವರವು ಕೇಳಿಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರ ಧ್ವನಿಯು ಜಲರಾಶಿಗಳ ಮೇಲೆ ಇದೆ; ಮಹಿಮೆಯ ದೇವರು ಇದ್ದಾರೆ; ಯೆಹೋವ ದೇವರು ಮಹಾಸಾಗರಗಳ ಮೇಲೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 29:3
21 ತಿಳಿವುಗಳ ಹೋಲಿಕೆ  

ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಕ್ಕೆ ಬಂದು ಕೈಯನ್ನೆತ್ತಿ ಯೆಹೋವನನ್ನು ಪ್ರಾರ್ಥಿಸಿದನು. ಗುಡುಗೂ, ಆನೆಕಲ್ಲಿನ ಮಳೆಯೂ ನಿಂತುಹೋದವು.


ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸುವುದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೊರಡುವುದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ” ಎಂದನು.


ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ.


ಆಗ ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.


ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.


ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.


ಹೇಗೆಂದರೆ, ಸಮುವೇಲನು ಯಜ್ಞವನ್ನು ಅರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಕ್ಕೋಸ್ಕರ ಸಮೀಪಿಸಲಾಗಿ, ಯೆಹೋವನು ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ ಇಸ್ರಾಯೇಲರಿಗೆ ಸೋತು ಓಡಿ ಹೋಗುವಂತೆ ಮಾಡಿದನು.


ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.


ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು.


ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು.


ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;


ಅದರ ಆರ್ಭಟವು ಆತನ ವಿಷಯವಾಗಿ ಪ್ರಕಟಿಸುವುದು, ದನಕರುಗಳೂ ಸಹ ಆತನ ಆಗಮನವನ್ನು ತಿಳಿಯುವವು.”


ನಿನ್ನ ಕೈಯೂ, ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು