ಕೀರ್ತನೆಗಳು 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿ; ನೀನು ನನ್ನ ಗೌರವಕ್ಕೆ ಆಧಾರನೂ ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ಯೆಹೋವನೇ, ನೀನೇ ನನ್ನ ಗುರಾಣಿ. ನೀನೇ ನನ್ನ ಗೌರವಕ್ಕೆ ಆಧಾರ. ನನ್ನನ್ನು ಜಯವೀರನನ್ನಾಗಿ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ಯೆಹೋವ ದೇವರೇ, ನೀವೇ ನನ್ನ ಸುತ್ತಲಿರುವ ಗುರಾಣಿಯೂ, ನನ್ನ ಮಹಿಮೆಯೂ ನನ್ನ ತಲೆ ಮೇಲೆತ್ತುವವರೂ ಆಗಿದ್ದೀರಿ. ಅಧ್ಯಾಯವನ್ನು ನೋಡಿ |
“ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.
ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.