Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 30:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಿನಗೆನ್ನ ವಂದನೆ ಪ್ರಭು, ನನ್ನನುದ್ಧರಿಸಿದೆ I ಶತ್ರುಗಳೆನ್ನ ಕುರಿತು ಹಿಗ್ಗದಂತೆ ಮಾಡಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವದಕ್ಕೆ ಅವಕಾಶಕೊಡದೆ ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನನ್ನನ್ನು ಇಕ್ಕಟ್ಟುಗಳಿಂದ ಮೇಲೆತ್ತಿದವನು ನೀನೇ; ಶತ್ರುಗಳಿಗೆ ಸೋತುಹೋಗಿ ಅವರ ಹಾಸ್ಯಕ್ಕೆ ಗುರಿಯಾಗದಂತೆ ಮಾಡಿದವನು ನೀನೇ; ಆದ್ದರಿಂದ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವೆನು; ನೀವು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿದ್ದೀರಿ. ನನ್ನನ್ನು ಮೇಲಕ್ಕೆ ಎತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 30:1
24 ತಿಳಿವುಗಳ ಹೋಲಿಕೆ  

ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.


ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ, ಅವರ ಆಶೆಗಳನ್ನು ನೆರವೇರಿಸಬೇಡ, ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ” ಎಂದು ಹೇಳುತ್ತೇನೆ. ಸೆಲಾ


ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು; ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು.


ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.


ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, “ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ.


ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.


ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ.


ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು.


ಯೆಹೋವನೇ, ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.


ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.


ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದುದರಿಂದ ಅವನು ಲೇವಿ ಮತ್ತು ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ.


ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು.


ಅರಸನು ಒಂದು ದಿನ ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ. ದೇವರ ಮಂಜೂಷವಾದರೂ ಬಟ್ಟೆಯ ಗುಡಾರದಲ್ಲಿ ಇರುತ್ತದೆ” ಎಂದು ಹೇಳಿದನು.


ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, “ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ” ಅಂದಳು.


ಮತ್ತು ಸೈನ್ಯಾಧಿಪತಿಗಳು ಅವರಿಗೆ, “ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಪ್ರತಿಷ್ಠೆ ಮಾಡದಿದ್ದರೆ ಅವನು ಆ ಮನೆಗೆ ಹೋಗಲಿ, ಅವನು ಯುದ್ಧಕ್ಕೆ ಬಂದು ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಳ್ಳಬಹುದು.


ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.


ನನ್ನ ಮೊರೆಯೊಡನೆ ಕೃತಜ್ಞತಾಸ್ತುತಿಯೂ ನನ್ನ ನಾಲಿಗೆಯ ಮೇಲಿತ್ತು.


ಅರಸನಾದ ದಾವೀದನು ಯೆರೂಸಲೇಮಿಗೆ ಬಂದ ಮೇಲೆ ತಾನು ಅರಮನೆ ಕಾಯುವುದಕ್ಕೋಸ್ಕರ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾಗಿ ಒಂದು ಮನೆಯಲ್ಲಿಟ್ಟು, ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಸಂಗಮಿಸಲಿಲ್ಲ. ಅವರು ಜೀವದಿಂದಿರುವವರೆಗೂ ವಿಧೆವೆಯರಂತಿದ್ದು ಕಾವಲಲ್ಲಿ ಇರಬೇಕಾಯಿತು.


ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ ಮತ್ತು ಕುರಿಗಳು ಲಕ್ಷದ ಇಪ್ಪತ್ತು ಸಾವಿರ, ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲರೂ ಯೆಹೋವನ ಆಲಯವನ್ನು ಪ್ರತಿಷ್ಠೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು