ಕೀರ್ತನೆಗಳು 30:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವದು; ಸಂಜೆಗೆ ದುಃಖವೆಂಬದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ ಮುಂಜಾನೆ ಹರ್ಷಧ್ವನಿಯು ಕೇಳಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆತನ ಕೋಪವು ಕ್ಷಣಮಾತ್ರವಿರುವುದು. ಆತನ ಪ್ರೀತಿಯಾದರೋ ಶಾಶ್ವತವಾದದ್ದು. ನಾನು ಸಂಜೆಯಲ್ಲಿ ದುಃಖದಿಂದ ಮಲಗಿಕೊಂಡರೂ ಮುಂಜಾನೆ ಹರ್ಷದಿಂದ ಎಚ್ಚರಗೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರ ಕೋಪವು ಕ್ಷಣಮಾತ್ರವೇ; ಆದರೆ ಅವರ ದಯೆಯು ಜೀವಮಾನವೆಲ್ಲಾ ಇರುತ್ತದೆ; ರಾತ್ರಿಯಲ್ಲಿ ದುಃಖ ಬಂದಿದ್ದರೂ; ಬೆಳಿಗ್ಗೆ ಆನಂದವು ಬರುವುದು. ಅಧ್ಯಾಯವನ್ನು ನೋಡಿ |