Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನಿನ್ನ ಮೊರೆಹೊಕ್ಕಿದ್ದೇನೆ; ನನ್ನನ್ನು ಎಂದಿಗೂ ಅವಮಾನಕ್ಕೆ ಗುರಿಪಡಿಸಬೇಡ. ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎನ್ನನುದ್ಧರಿಸು ಪ್ರಭು, ನಿನ್ನ ನೀತಿಗನುಸಾರ I ನಿನ್ನ ಶರಣನಾದೆ, ನನಗಾಗದಿರಲಿ ತಾತ್ಸಾರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನಿನ್ನ ಮರೆಹೊಕ್ಕಿದ್ದೇನೆ; ನನಗೆ ಎಂದಿಗೂ ಆಶಾಭಂಗಪಡಿಸಬೇಡ. ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ. ಕರುಣೆತೋರಿ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನಿಮ್ಮನ್ನೇ ಆಶ್ರಯಿಸಿಕೊಂಡಿದ್ದೇನೆ; ನಾನು ಎಂದಿಗೂ ನಾಚಿಕೆಪಡದಂತೆ ಮಾಡಿರಿ; ನಿಮ್ಮ ನೀತಿಯಲ್ಲಿ ನನ್ನನ್ನು ವಿಮೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:1
11 ತಿಳಿವುಗಳ ಹೋಲಿಕೆ  

“ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.


ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು.


ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ಮತ್ತು ನಿನ್ನ ಪವಿತ್ರ ಪರ್ವತವೂ ಆದ ಯೆರೂಸಲೇಮಿನ ಮೇಲೆ ನಿನಗಿರುವ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪೂರ್ವಿಕರ ಪಾಪಾಪರಾಧಗಳ ನಿಮಿತ್ತ ಯೆರೂಸಲೇಮೂ, ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.


ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.


ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು