ಕೀರ್ತನೆಗಳು 31:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ, ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ; ನನ್ನ ಸಂಕಟಗಳಿಂದ ನನ್ನ ಶಕ್ತಿಯು ಕುಂದಿಹೋಗಿದೆ; ನನ್ನ ಎಲುಬುಗಳು ಸವೆದುಹೋಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕರಗುತ್ತಿದೆ ಬದುಕು ತಾಪದಲಿ; ಕುಂದುತ್ತಿದೆ ಶಕ್ತಿ ಪಾಪದಲಿ I ಸವೆದು ಹೋಗುತ್ತಿವೆ ನನ್ನ ದೇಹದೆಲುಬುಗಳು ಕಾಲ ಚಕ್ರದಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ; ನನ್ನ ಅಪರಾಧದಿಂದ ನನ್ನ ಶಕ್ತಿಯು ಕುಂದಿಹೋಯಿತು; ನನ್ನ ಎಲುಬುಗಳು ಸವೆದುಹೋಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನನ್ನ ಜೀವಿತವು ದುಃಖದಲ್ಲಿ ಕೊನೆಗೊಳ್ಳುತ್ತಿದೆ. ನನ್ನ ವರ್ಷಗಳು ನಿಟ್ಟುಸಿರಿನಲ್ಲೇ ಕಳೆದುಹೋಗುತ್ತಿವೆ. ನನ್ನ ಇಕ್ಕಟ್ಟುಗಳು ನನ್ನ ಶಕ್ತಿಯನ್ನು ಕುಂದಿಸುತ್ತಿವೆ. ನನ್ನ ಬಲವು ನನ್ನನ್ನು ಬಿಟ್ಟುಹೋಗುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನನ್ನ ಜೀವವು ಚಿಂತೆಯಿಂದಲೂ, ನನ್ನ ವರ್ಷಗಳು ನಿಟ್ಟುಸಿರಿನಿಂದಲೂ ಕಳೆದುಹೋಗಿವೆ; ನನ್ನ ಅಪರಾಧದಿಂದ ನನ್ನ ಶಕ್ತಿಯು ಕುಂದಿಹೋಗಿದೆ; ನನ್ನ ಎಲುಬುಗಳು ಕ್ಷೀಣವಾಗಿವೆ. ಅಧ್ಯಾಯವನ್ನು ನೋಡಿ |