ಕೀರ್ತನೆಗಳು 31:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಶತ್ರುಗಳ ದೂಷಣೆಗೆ ಗುರಿಯಾದೆ, ನೆರೆಯವರಿಗೆ ನಿಂದಾಸ್ಪದನಾದೆ I ಮಿತ್ರರೂ ಬೆದರುವಂತಾದೆ; ದಾರಿಹೋಕರು ದೂರವಾಗುವಂತಾದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ; ನನ್ನ ನೆರೆಹೊರೆಯವರೂ ನನ್ನನ್ನು ನಿಂದಿಸುವರು; ನನ್ನ ಸಂಬಂಧಿಕರೂ ನನ್ನ ವಿಷಯದಲ್ಲಿ ಭಯಪಡುವರು; ನನ್ನನ್ನು ದಾರಿಯಲ್ಲಿ ಕಂಡರೂ ಕಾಣದಂತೆ ಹೊರಟುಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನನ್ನ ವೈರಿಗಳೆಲ್ಲರ ನಿಮಿತ್ತವಾಗಿ ನನ್ನ ನೆರೆಯವರಿಗೆ ನಾನು ನಿಂದೆಯೂ, ಮಿತ್ರರಿಗೆ ಹೆದರಿಕೆಯೂ ಆಗಿದ್ದೇನೆ; ದಾರಿಯಲ್ಲಿ ನನ್ನನ್ನು ಕಂಡವರು ನನ್ನನ್ನು ಬಿಟ್ಟು ಓಡಿಹೋಗುತ್ತಾರೆ. ಅಧ್ಯಾಯವನ್ನು ನೋಡಿ |