Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಶತ್ರುಗಳು ನನಗೆ ರಹಸ್ಯವಾಗಿ ಹಾಕಿದ ಬಲೆಯೊಳಗೆ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ವೈರಿಗಳ ಉರುಲುಬಂಡೆಯಿಂದೆನ್ನನು ರಕ್ಷಿಸು I ಅದರಲಿ ನಾ ಸಿಕ್ಕಿ ಬೀಳುವುದನು ತಪ್ಪಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಶತ್ರುಗಳು ನನಗೆ ರಹಸ್ಯವಾಗಿ ಒಡ್ಡಿದ ಬಲೆಯೊಳಗೆ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ವೈರಿಗಳು ನನಗೆ ಬಲೆಬೀಸಿದ್ದಾರೆ. ಅವರ ಬಲೆಗೆ ಸಿಕ್ಕಿಬೀಳದಂತೆ ನನ್ನನ್ನು ರಕ್ಷಿಸು. ನೀನೇ ನನ್ನ ಆಶ್ರಯಸ್ಥಾನವಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ವೈರಿಯು ಗುಪ್ತವಾಗಿ ಒಡ್ಡಿದ ಬಲೆಯೊಳಗಿಂದ ನನ್ನನ್ನು ಹೊರಗೆ ಎಳೆಯಿರಿ; ನೀವೇ ನನಗೆ ಆಶ್ರಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:4
11 ತಿಳಿವುಗಳ ಹೋಲಿಕೆ  

ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ; ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು.


ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ, ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ, ನನಗಾಗಿ ಬಲೆಬೀಸಿಟ್ಟಿದ್ದಾರೆ. ಸೆಲಾ


ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.


ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ


ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.


ನೆರೆಯವನೊಂದಿಗೆ ವಂಚನೆಯ ಸವಿನುಡಿಗಳನ್ನು ಆಡುವವನು, ಅವನ ಹೆಜ್ಜೆಗೆ ಬಲೆಯನ್ನೊಡ್ಡುವನು.


ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.


ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.


ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.


ಯೆಹೋವನು ಸ್ತೋತ್ರಕ್ಕೆ ಅರ್ಹನು; ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.


ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು